ಬೆಳಗಾವಿ ಕಲಾಪದಲ್ಲಿ ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

WhatsApp
Telegram
Facebook
Twitter
LinkedIn

ಬೆಳಗಾವಿ : ವಿಧಾನಸಭೆ ಮತ್ತು ಪರಿಷತ್‌ ಕಲಾಪದಲ್ಲೂ ಕಾಂಗ್ರೆಸ್‌ ಶಾಸಕರು ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಇಂದು ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಅಮಿತ್‌ ಶಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಚರ್ಚೆಗೆ ಆಗ್ರಹಿಸಿದರು. ಸದನದಲ್ಲಿ ನಿರ್ಣಯ ಕೈಗೊಳಲು ಒತ್ತಾಯಿಸಿದರು.ಸದನದಲ್ಲಿ ಒಟ್ಟಾಗಿ ನಿಂತು ಅಂಬೇಡ್ಕರ್ ಫೊಟೋ ಹಿಡಿದು ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಬಿಜೆಪಿಯವರು ಕಾಂಗ್ರೆಸ್‌ನಿಂದಲೇ ಅಂಬೇಡ್ಕರ್‌ ಅವರಿಗೆ ಅನ್ಯಾಯವಾಗಿದೆ ಎಂದು ಹೇಳಿ ಪ್ರತಿಭಟಿಸಿದರು.

ಈ ವೇಳೆ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪ್ರದರ್ಶಿಸಿದ ಅಂಬೇಡ್ಕರ್ ಭಾವಚಿತ್ರವನ್ನೇ ತೆಗೆದುಕೊಂಡು ಕಾಂಗ್ರೆಸ್ ವಿರುದ್ಧವೇ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ‌ ಪ್ರದರ್ಶಿಸಿದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಮಿತ್ ಶಾ ಅವರನ್ನು ಸಮರ್ಥಿಸಿ ಸದನದಿಂದ ಹೊರ ನಡೆದರು.ಗದ್ದಲ, ಕೋಲಾಹಲ ಜೋರಾಗುತ್ತಿದ್ದಂತೆ ಸ್ಪೀಕರ್‌ ಹತ್ತು ನಿಮಿಷ ಕಲಾಪವನ್ನು ಮುಂದೂಡಿದರು

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon