ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ನಗರದಲ್ಲಿ ಸ್ತಬ್ದಚಿತ್ರಗಳು ಹಾಗೂ ಕಲಾತಂಡಗಳೊAದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ ಮಾಡಲಾಯಿತು.

ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪುಷ್ಪ ನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಆನೆಬಾಗಿಲು, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚನ್ನಮ್ಮ, ಮಹಾವೀರ, ಅಂಬೇಡ್ಕರ್, ಮದರಕರಿ ನಾಯಕ ವೃತ್ತಗಳ ಮಾರ್ಗವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಭವನ ತಲುಪಿತು.

ಮೆರವಣಿಗೆಯಲ್ಲಿ ನಾಸಿಕ್ ಡೋಲ್, ತಾಷರಾಮ್ ಡೋಲ್ ಜಾನಪದ ಕಲಾತಂಡಗಳು ಭಾಗವಹಿಸಿದ್ದವು. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚನಾ ಸಭೆಯ ಅಧ್ಯಕ್ಷ ಡಾ.ಬಾಬು ರಾಜೇಂದ್ರ ಪ್ರಸಾದ್ ಅವರಿಗೆ ಸಂವಿಧಾನ ಪ್ರತಿ ಹಸ್ತಾಂತರಿಸುವ ಸ್ತಬ್ದ ಗಮನ ಸೆಳೆಯಿತು. ಇದರೊಂದಿಗೆ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳ ಅಡಿ ದೊರೆಯುವ ಸರ್ಕಾರದ ಸೌಲತ್ತುಗಳ ಮಾಹಿತಿಯನ್ನು ಪ್ರಚುರಪಡಿಸಲಾಯಿತು.

ಮೆರವಣಿಗೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿ.ಪಂ. ಸಿಇಓ ಡಾ.ಆಕಾಶ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಉಪ ವಿಭಾಗಾಧಿಕಾರಿ ಕಾಂತರಾಜು ಸೇರಿದಂತೆ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಮುಖಂಡರು ಭಾಗವಹಿಸಿದ್ದರು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon