ಬೆಂಗಳೂರು : ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್ ಎಸ್ ಎಸ್ ಮತ್ತು ಬಜರಂಗದಳದಿಂದ ಸಿಎಂ ಸಿದ್ದರಾಮಯ್ಯ ಸದನದಲ್ಲೇ ಬಹಿರಂಗವಾಗಿ ಟೀಕಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿ ಮಾಡಿದೆ. ಜೂನ್ 26ರೊಳಗೆ ಕೋರ್ಟ್ ನೋಟಿಸ್ ಗೆ ಉತ್ತರಿಸಬೇಕು ಎಂದು ಹೇಳಲಾಗಿದೆ.
ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್ಎಸ್ಎಸ್ ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸದನದಲ್ಲಿ ಅಲ್ಲೋಲ ಕಲ್ಲೋಲವೇ ಆಗಿತ್ತು. ಬಿಜೆಪಿ ಶಾಸಕರು ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ವಾಗ್ದಾಳಿ ನಡೆಸಿದ್ದರು.
ಜನರ ಭಾವನೆಗಳಿಗೆ ಧಕ್ಕೆ ಆರೋಪದಡಿ ಕಿರಣ್ ಎನ್ನುವರು ಸಿದ್ದರಾಮಯ್ಯ ವಿರುದ್ಧ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು. ಕೋರ್ಟ್, ಈ ಕೇಸ್ ದಾಖಲಿಸಿಕೊಳ್ಳುವ ಮುನ್ನ ಸಿಎಂ ಸಿದ್ದರಾಮಯ್ಯನವರ ವಾದ ಆಲಿಸಲು ಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಬಿಎನ್ ಎಸ್ಎಸ್ ಸೆಕ್ಷನ್ 223 ಅಡಿಯಲ್ಲಿ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ.