ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ವಂತ ಬಲದಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಜೊತೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಕಾಂಗ್ರೆಸ್ ಜೊತೆಗೆ ಆಪ್ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ವರದಿ ಬೆನ್ನಲ್ಲೇ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅವರು , ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಹೋರಾಡಲಿದೆ. ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದಿದ್ದಾರೆ.
ಇಂಡಿಯಾ ವಿರೋಧ ಪಕ್ಷದ ಭಾಗವಾಗಿದ್ದರೂ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಅರವಿಂದ್ ಕೇಜ್ರಿವಾಲ್ ತಳ್ಳಿಹಾಕಿದ್ದು ಇದೇ ಮೊದಲಲ್ಲ. ದೆಹಲಿ ವಿಧಾನಸಭಾ ಚುನಾವಣೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.