ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ ಎಂದು ಸಿ.ಟಿ ರವಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಪ್ರಾರ್ಥನೆ ಮಾಡಿದ್ದಾರೆ.
ಚನ್ನಮ್ಮನ ಕಿತ್ತೂರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಹೆಬ್ಬಾಳಕರ್ ಅವರು ಸದ್ಯ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಟಿ ರವಿ ಟ್ವೀಟ್ ಮಾಡಿದ್ದಾರೆ.
“ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಅವರ ಸಹೋದರ ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ” ಎಂದು ಸಿಟಿ ರವಿ ಹಾರೈಸಿದ್ದಾರೆ.