ಬೆಂಗಳೂರು: ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಉಂಟಾದ ಪರಿಣಾಮ ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು ಇಂದಿನಿಂದ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತ ಉಂಟಾಗಿದೆ. ಇದು ನಾಳೆ ಮತ್ತು ನಾಡಿದ್ದು ತೀವ್ರವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ. ಇದರ ಪ್ರಭಾವ ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಿರುತ್ತದೆ. ಇಂದಿನಿಂದ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದ್ದು, ಐದನೇ ದಿನ ಕೆಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.