ಕೋಲಾರ ತಮಿಳುನಾಡು ಕರಾವಳಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತದ ಎಫೆಕ್ಟ್ ಕರ್ನಾಟಕಕ್ಕೂ ತಟ್ಟಿದೆ.
ನಿರಂತರ ಮಳೆ ಹಾಗೂ ವಿಪರೀತ ಚಳಿ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಡಿ. 2ರಂದು ಒಂದು ದಿನ ರಜೆ ಘೋಷಣೆ ಮಾಡಲಾಗಿದೆ.
ನಾಳಿನ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಲು ಡಿಸಿ ಅಕ್ರಂ ಪಾಷಾ ಆದೇಶ ನೀಡಿದ್ದಾರೆ. ಕೋಲಾರ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ತರಗತಿಗಳು ಎಂದಿನಂತೆ ನಡೆಯಲಿವೆ.