ಧಾರವಾಡ: : ರಾಜ್ಯ ಸರ್ಕಾರ ಒಳ ಮೀಸಲಾತಿ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಧಾರವಾಡದ ಉಪ್ಪಿನಬೆಟಗೇರಿ ಗ್ರಾಮದಲ್ಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಮುಸ್ಲಿಮರ ಮೀಸಲಾತಿ ಕುರಿತು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಪ್ರಕರಣದ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ಮೇ 9 ಕ್ಕೆ ದಿನಾಂಕ ಮುಂದೂಡಿದ್ದು, ಕೋರ್ಟ್ ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ’ ಎಂದರು.