ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ ಆಸ್ಪತ್ರೆಗೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಲಾಗಿದೆ.
ಯಾವುದೇ ಆಪರೇಷನ್ ಮಾಡಿಸಿಕೊಳ್ಳದೇ ಕೇವಲ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದಾರೆ. ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್ ಅವರಿಗೆ ಹೈಕೋಟ್ ಮೆಡಿಕಲ್ ಗ್ರೌಂಡ್ಸ್ ಮೇಲೆ ಮಧ್ಯಂತರ ಜಾಮೀನು ನೀಡಿತ್ತು. ಇದಾದ ಬಳಿಕ ದರ್ಶನ್ ಸಲ್ಲಿಸಿದ್ದ ಪೂರ್ಣ ಪ್ರಮಾಣ ಜಾಮೀನು ಅರ್ಜಿಯ ವಿಚಾರಣೆ ನಡೆದು ಡಿ.13 ರಂದು ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು ನೀಡಿ ಹೈಕೋರ್ಟ್ ಪೀಠ ಆದೇಶಿಸಿತು.
ಒಂದೂವರೆ ತಿಂಗಳಿಂದ ಆಸ್ಪತ್ರೆಯಲ್ಲಿದ್ದ ದರ್ಶನ್ ಅವರು ನಿನ್ನೆ ಸೆಷನ್ ಕೋರ್ಟ್ಗೆ ತೆರಳಿ ಬೇಲ್ಗೆ ಸಂಬಂಧಪಟ್ಟ ಕಾನೂನು ಪ್ರಕ್ರಿಯೆಗಳನ್ನ ಮುಗಿಸಿ ಆಸ್ಪತ್ರೆಗೆ ರಿಟರ್ನ್ ಆಗಿದ್ದರು. ಇಂದು ದರ್ಶನ್ಗೆ ಬಿಜೆಎಸ್ ಆಸ್ಪತ್ರೆಯಲ್ಲಿ ವೈದ್ಯರು ಕೌನ್ಸೆಲಿಂಗ್ ಮಾಡಿದ್ದು, ಮತ್ತೆ ಅಗತ್ಯವಿದ್ದಲ್ಲಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ದರ್ಶನ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.