ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 130 ದಿನಗಳಿಂದ ಜೈಲಿನಲ್ಲಿದ್ದರು. ಬೆನ್ನು ನೋವು ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದ ಅವರು ಈಗ ಆಸ್ಪತ್ರೆಯಲ್ಲಿದ್ದಾರೆ. ಇಂದು ಹೈಕೋರ್ಟ್ನಲ್ಲಿ ಜಾಮೀನು ಅರ್ಜಿಯ ತೀರ್ಪು ಪ್ರಕಟವಾಗಲಿದೆ. ಈ ತೀರ್ಪು ಸಿನಿಮಾ ಭವಿಷ್ಯವನ್ನು ನಿರ್ಧರಿಸಲಿದೆ.
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು. ಆ ಬಳಿಕ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಕೇಸ್ನ ಕಾರಣದಿಂದ ಅವರು ಒಪ್ಪಿಕೊಂಡ ಸಿನಿಮಾಗಳು ಸಂಕಷ್ಟದಲ್ಲಿ ಇವೆ. ಇಂದು (ಡಿಸೆಂಬರ್ 13) ಅವರಿಗೆ ಪ್ರಮುಖ ದಿನ ಆಗಲಿದೆ. ದರ್ಶನ್ಗೆ ಜಾಮೀನು ಸಿಗುತ್ತದೆಯೋ ಅಥವಾ ಇಲ್ಲವೋ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ಇದರ ಜೊತೆಗೆ ಸಿನಿ ಭವಿಷ್ಯವೂ ಇಂದೇ ನಿರ್ಧಾರ ಆಗಲಿದೆ.