ಚಿತ್ರದುರ್ಗ: ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 64 ಅಂಗನವಾಡಿ ಕಾರ್ಯಕರ್ತೆ, 3 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 149 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದ್ದು, ಡಿ.03 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ
ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಪಟ್ಟಿಯನ್ನು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯತಿ, ಶಾಲೆ, ಸಮುದಾಯ ಭವನ ಹಾಗೂ ಗ್ರಂಥಾಲಯ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಯಾವುದಾದರು ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ 2024ರ ಡಿ.3ರ ಸಂಜೆ 5.30ರೊಳಗೆ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು. ತಡವಾಗಿ ಬಂದ ಹಾಗೂ ಸೂಕ್ತ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.
(ಸಾಂದರ್ಭಿಕ ಚಿತ್ರ)