ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಕಾರ್ಯಾಚರಣೆ ವಿಭಾಗದ ವ್ಯಾಪ್ತಿಯಲ್ಲಿನ 66/11 ಕೆ.ವಿ ಕುಕ್ಕುವಾಡ ಮತ್ತು ಶ್ಯಾಗಲೆ ವಿದ್ಯತ್ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 66/11 ಕೆವಿ ಕುಕ್ಕುವಾಡ ಮತ್ತು ಶ್ಯಾಗಲೆ ವಿದ್ಯುತ್ ಪ್ರಸರಣ ಕೇಂದ್ರದಿಂದ ಸರಬರಾಜಾಗುವ 11 ಕೆವಿ ಮಾರ್ಗಗಳಲ್ಲಿ ನವೆಂಬರ್ 20 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಮಾರ್ಗಗಳು: ಕುಕ್ಕುವಾಡ 66/11 ಕೆವಿ ಮಾರ್ಗದ ಕುಕ್ಕುವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳಲ್ಲಿ ಮತ್ತು ಶ್ಯಾಗಲೆ 66/11 ಕೆವಿ ಮಾರ್ಗದ ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣೀವಾಡ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಸಹಾಯಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
































