ದಾವಣಗೆರೆ: 107- ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ವೆಚ್ಚ ವೀಕ್ಷಕರನ್ನಾಗಿ ಇಂಧನ ಅಶೋಕ್ ಕುಮಾರ್ ಇವರನ್ನು ಚುನಾವಣಾ ಆಯೋಗ ನೇಮಿಸಿದೆ.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠಲರಾವ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
































