ಚಿತ್ರದುರ್ಗ: ಪ್ರಯಾಗ್ ರಾಜ್ ನಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ ಇತ್ತೀಚೆಗೆ ಜರುಗಿದ ಕಾಲ್ತುಳಿತದಲ್ಲಿ ಚಿತ್ರದುರ್ಗದ ಓರ್ವರು ಬಲಿಯಾಗಿದ್ದಾರೆ ಎಂಬುದಾಗಿ ಕೆಲ ಮಾಧ್ಯಮ ದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದು, ಆದರೆ ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ.
ವಾಸ್ತವವಾಗಿ ಆ ವ್ಯಕ್ತಿಯು ಪ್ರಯಾಗ್ ರಾಜ್ ನಿಂದ ಸುಮಾರು 500 km ದೂರದ ಲ್ಲಿರುವ ಝಾನ್ಸಿಯ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಶವವಾಗಿ ಪತ್ತೆಯಾಗಿದ್ದು, ಈ ವಿಷಯವನ್ನು ಅಲ್ಲಿನ ರೈಲ್ವೆ ನಿಲ್ದಾಣದ ನೋಟಿಸ್ ಬೋರ್ಡ್ ನಲ್ಲಿ ಪ್ರಕಟಿಸಲಾಗಿರುತ್ತದೆ.
ಈ ಕುರಿತು ರೈಲ್ವೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಳ್ಳಲಾಗಿದೆ. ಹೀಗಾಗಿ ಝಾನ್ದಿ ರೈಲ್ವೆ ನಿಲ್ದಾಣ ದಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವವನ್ನು ಇಲ್ಲಿನ ಆಸ್ಪತ್ರೆ ಯ ಶವಾಗಾರದಲ್ಲಿ ಇರಿಸಲಾಗಿದ್ದು, ಯಾರಾದರೂ ವಾರಸುದಾರರಿದ್ದಲ್ಲಿ, ಶವ ಗುರುತಿಸಿ, ಪತ್ತೆ ಮಾಡಿಕೊಳ್ಳಬಹುದಾಗಿದೆ.
ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ.