ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಭತ್ತ ಕಟಾವು ಮಾಡಲು ಪ್ರತಿ ಗಂಟೆಗೆ ಯಂತ್ರಕ್ಕೆ ರೂ.2600 ಗಳ ಗರಿಷ್ಠ ದರ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶಿಸಿದ್ದಾರೆ.
ಭತ್ತ ಕಟಾವು ಯಂತ್ರದ ಮಾಲೀಕರು ಈ ದರ ಮೀರದಂತೆ ಭತ್ತ ಕಟಾವು ಕೈಗೊಳ್ಳಬೇಕು. ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದರೆ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಭತ್ತ ಕಟಾವು ಯಂತ್ರದ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದಲ್ಲಿ ರೈತರು ಕಂದಾಯ ಅಥವಾ ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿದ್ದಾರೆ.