ಶಿವಮೊಗ್ಗ: ಇಂದು ಬೆಳ್ಳಂಬೆಳಿಗ್ಗೆ ಶಿವಮೊಗ್ಗದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ನಕಲಿ ಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಗೋಪಾಲಗೌಡ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಶೋಭಾ ಅವರ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಮೊಗ್ಗದ ಗಾಂಧಿಬಜಾರ್ ನಗರ ಶಾಖೆಯಲ್ಲಿ ೨೦೧೪ ರ ಜೂನ್‌ನಲ್ಲಿ ನಡೆದಿದ್ದ ನಕಲಿ ಗೋಲ್ಡ್ ಪ್ರಕರಣ ಸಂಬಂಧಿಸಿದಂತೆ, ಆ ವೇಳೆ ಶಾಖೆಯ ಮ್ಯಾನೇಜರ್ ಆಗಿದ್ದ ಶೋಭಾರವರ ನಿವಾಸದ ಮೇಲೆ ಬೆಂಗಳೂರಿನಿಂದ ಮೂರು ಪ್ರತ್ಯೇಕ ವಾಹನಗಳಲ್ಲಿ ಆಗಮಿಸಿರುವ ೮ ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದ್ದಾರೆ.
