ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಫಖ್ತುಂಖ್ವಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಸೇನಾ ನಾಯಕ ಮೃತಪಟ್ಟಿದ್ದಾರೆ. ಜೊತೆಗೆ 10 ಉಗ್ರರು ಕೂಡ ಹತರಾಗಿದ್ದಾರೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.
ಗುರುವಾರ ನಡೆದ ಈ ಎನ್‌ಕೌಂಟರ್‌ನಲ್ಲಿ ನಿಷೇಧಿತ ಸಂಘಟನೆಗೆ ಸೇರಿದ ಕನಿಷ್ಠ 10 ಉಗ್ರರು ಹತರಾಗಿದ್ದಾರೆ. ಜೊತೆಗೆ ಈ ಕಾರ್ಯಾಚರಣೆಯ ವೇಳೆ ಪಾಕಿಸ್ತಾನಿ ಸೇನಾ ಕ್ಯಾಪ್ಟನ್ ಹಸ್ನೈನ್ ಅಖ್ತರ್ ಕೂಡ ಮೃತಪಟ್ಟಿದ್ದಾರೆ. ಗುಪ್ತಚರ ಮಾಹಿತಿಯ ಆಧಾರದ ಮೇರೆಗೆ ದಕ್ಷಿಣ ವಜೀರಿಸ್ತಾನದ ಗಡಿಯಲ್ಲಿರುವ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಕರ್ರಿ ಮಲಾಂಗ್ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ.
ಕಾರ್ಯಾಚರಣೆಯಲ್ಲಿ ಇನ್ನೂ ಮೂವರು ಸೈನಿಕರು ಗಾಯಗೊಂಡಿದ್ದಾರೆ. ಖೈಬರ್ ಪಖ್ತುಂಖ್ವಾದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಈ ಎನ್‌ಕೌಂಟರ್ ನಡೆದಿದೆ. ಈ ಸಂದರ್ಭದಲ್ಲಿ, ನಿಷೇಧಿತ ಸಂಘಟನೆಗೆ ಸೇರಿದ ಕನಿಷ್ಠ 10 ಭಯೋತ್ಪಾದಕರು ಮತ್ತು ಪಾಕಿಸ್ತಾನಿ ಸೇನೆಯ ಕ್ಯಾಪ್ಟನ್ ಕೊಲ್ಲಲ್ಪಟ್ಟರು ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.
ಪಾಕಿಸ್ತಾನ ಸಶಸ್ತ್ರ ಪಡೆಗಳ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಈ ಮಾಹಿತಿಯನ್ನು ನೀಡಿದೆ. ಈ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಬಂದ ಬಳಿಕ ಗುರುವಾರ ಗುಪ್ತಚರ ಆಧಾರಿತ ಕಾರ್ಯಾಚರಣೆ (ಐಬಿಒ) ಪ್ರಾರಂಭಿಸಲಾಯಿತು. ಹತ್ಯೆಗೀಡಾದ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಎಸ್‌ಪಿಆರ್ ತಿಳಿಸಿದೆ. ಈ ಭಯೋತ್ಪಾದಕರು ವಿವಿಧ ಕಾನೂನು ಜಾರಿ ಸಂಸ್ಥೆಗಳ ವಿರುದ್ಧ ಹಲವಾರು ದಾಳಿಗಳನ್ನು ನಡೆಸುವುದರ ಜೊತೆಗೆ ಅಮಾಯಕ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.