ಬೆಳಗಾವಿ : ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಉಳಿದ 7 ಕೃಷ್ಣ ಮೃಗಗಳನ್ನ ಉಳಿಸಲು ವೈದ್ಯರು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಮೃಗಾಲಯದಲ್ಲಿ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ವೈದ್ಯರು ಉಳಿದಿರುವ 7 ಕೃಷ್ಣಮೃಗಗಳಿಗೆ ಆಂಟಿ ಬಯೋಟೆಕ್ ಚಿಕಿತ್ಸೆ ನೀಡುತ್ತಿದ್ದಾರೆ.
ಕೃಷ್ಣಮೃಗಗಳಿಗೆ ಸಾವಿಗೆ ಗಳಲೆ ರೋಗ ಕಾರಣ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಬ್ಬಂದಿ ಮೃಗಾಲಯದ ಒಳಗಡೆ ಔಷಧಿ ಸಿಂಪಡಣೆ ಮಾಡಿದ್ದಾರೆ. ಗಳಲೆ ರೋಗ ಇತರೆ ಸಾಕು ಪ್ರಾಣಿಗಳಿಗಳಿಗೆ ಹರಡುವ ಭೀತಿ ಇರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.































