ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿಯಲ್ಲಿ ಹಿಮಕುಸಿತದಿಂದ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಗಾಯಗೊಂಡಿದ್ದ ಕಾರ್ಮಿಕರು ಜೋಶಿಮಠದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿಮದಡಿ ಒಟ್ಟು 55 ಕಾರ್ಮಿಕರು ಸಿಲುಕಿದ್ದರು. ಇದುವರೆಗೆ 50 ಜನರನ್ನು ರಕ್ಷಣೆ ಮಾಡಿದ್ದು, ಬಾಕಿ ಐದು ಜನರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ.
ಘಟನಾ ಸ್ಥಳದಿಂದ ಆಸ್ಪತ್ರೆಗೆ ಸಾಗಿಸಲು ಆರು ಹೆಲಿಕಾಪ್ಟರ್ಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಸ್ಥಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಗಿದೆ. ಸಿಎಂ ಪುಷ್ಕರ್ ಸಿಂಗ್ ಧಾಮಿ ಅಧಿಕಾರಿಗಳ ಸಭೆ ನಡೆಸಿದ್ದಾರೆ.