ಕ್ಷೇತ್ರದ ಪ್ರತಿಯೊಂದು ಹಳ್ಳಿಗಳ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

WhatsApp
Telegram
Facebook
Twitter
LinkedIn

ಚಿತ್ರದುರ್ಗ: ಕ್ಷೇತ್ರದ ಪ್ರತಿಯೊಂದು ಹಳ್ಳಿಗಳ ಅಭಿವೃದ್ಧಿಗಾಗಿ ಪಣತೊಟ್ಟಿದ್ದೇನೆ, ಅಧಿಕಾರದ ಅವಧಿಗಿಂತ ಒಂದು ಕೈ ಮೀರಿ ಕ್ಷೇತ್ರದ ಕ್ಷೇಮಭಿವೃದ್ಧಿಗಾಗಿ ಪ್ರಾಮಾಣಿಕವಾದ ಕಾರ್ಯವನ್ನು ನಿರ್ವಹಿಸುತ್ತೇನೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರರು.

ತಾಲೂಕಿನ ಸೊಂಡೆಕೊಳ, ಕಕ್ಕೇರು ಗ್ರಾಮದಲ್ಲಿ ಭಾನುವಾರ ಸಿ.ಸಿ ರಸ್ತೆ, ಚರಂಡಿ ನಿರ್ಮಾಣದ ಕಾರ್ಯಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು, ಕ್ಷೇತ್ರದ ಮತದಾರರು ನನ್ನ ಮೇಲೆ ನಂಬಿಕೆಯನ್ನ ಇಟ್ಟು ಮತವನ್ನು ನೀಡಿ ಜನರ ಸೇವೆಗಾಗಿ ಅವಕಾಶ ಮಾಡಿಕೊಟ್ಟಿದ್ದಾರೆ ಅವರ ಕ್ಷೇಮಭಿವೃದ್ಧಿ ಮಾಡುವುದು ನನ್ನ ಕರ್ತವ್ಯವಾಗಿದೆ, ಅದರಂತೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಎಲ್ಲಾ ಹಳ್ಳಿಗಳಲ್ಲಿ ಅವಶ್ಯಕವಾಗಿ ಬೇಕಿರುವಂತಹ ಸೌಲಭ್ಯಗಳನ್ನು ವಿಶೇಷ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳ ಭೂಮಿ ಪೂಜೆಯನ್ನು ನೆರವೇರಿಸಲಾಗುವುದು ಎಂದು ಹೇಳಿದರು.

ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ಬಳಿ ಹೋಗಿ ವಿಶೇಷ ಅನುದಾನಗಳನ್ನು ತರುವುದರ ಮೂಲಕ ಅಭಿವೃದ್ಧಿ ಕಡೆಗೆ ಒಂದು ಹೆಜ್ಜೆ ಎನ್ನುವಂತೆ ಕೆಲಸ ಮಾಡುತ್ತಿದ್ದೇನೆ, ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯವಾಗಿ ಬೇಕಿರುವಂತಹ ಸಿ.ಸಿ ರಸ್ತೆ, ಕುಡಿಯುವ ನೀರು, ವಿದ್ಯುತ್ ದೀಪ, ಶುದ್ಧ ಕುಡಿಯುವ ನೀರಿನ ಘಟಕ, ಬಂಡಿದಾರಿಗಳನ್ನು ಅಭಿವೃದ್ಧಿಪಡಿಸುವುದು ಹೀಗೆ ಅನೇಕ ಕಾರ್ಯ ಅಭಿವೃದ್ಧಿ ಕಾರ್ಯಗಳು ಕಾರ್ಯಾನ್ಮುಖವಾಗಿವೆ, ಉಳಿದಂತ ಎಲ್ಲಾ ಅಭಿವೃದ್ಧಿ ಕಾರ್ಯಗಳು ಹಂತ ಹಂತವಾಗಿ ಮಾಡಲಾಗುವುದೆಂದು ತಿಳಿಸಿದರು.

2024-25ನೇ ಸಾಲಿನ ಮಳೆ ಪರಿಹಾರ ಕಾರ್ಯಕ್ರಮದ ಯೋಜನೆ ಅಡಿಯಲ್ಲಿ ಚಿತ್ರದುರ್ಗ ತಾಲೂಕಿನ ಸೊಂಡೆಕೊಳ ಗ್ರಾಮದಲ್ಲಿ ಓಣಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ 20 ಲಕ್ಷ, ಕಕ್ಕರೇಹು ಗ್ರಾಮದ ಎಸ್ಸಿ ಕಾಲೋನಿಯಲ್ಲಿ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ 55 ಲಕ್ಷ, ಎಸ್ಟಿ ಕಾಲೋನಿಯಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 40 ಲಕ್ಷ ಅನುದಾನಗಳ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ ಎಂದು ವ್ಯಕ್ತಪಡಿಸಿದರು.

ರೈತ ಈ ದೇಶದ ಬೆನ್ನೆಲುಬು, ರೈತರಿಗೆ ಅನುಕೂಲವಾಗಬೇಕೆನ್ನುವ ನಿಟ್ಟಿನಲ್ಲಿ ಸಾಕಷ್ಟು ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡುವುದಕ್ಕೆ ಈಗಾಗಲೇ ಅನುದಾನವನ್ನ ಬಿಡುಗಡೆ ಮಾಡಲಾಗಿದೆ ಕೆಲವು ಭಾಗಗಳಲ್ಲಿ ಬೃಹತ್ ಚೆಕ್ ಡ್ಯಾಂ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಸಹ ಕಳಿಸಲಾಗಿದೆ, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಬೇಕೆನ್ನುವ ಯೋಜನೆಯನ್ನ ರೂಪಿಸಬೇಕೆನ್ನುವುದು ಆಲೋಚನೆಯನ್ನು ಮಾಡಲಾಗಿದೆ ಎಂದು ಹೇಳಿದರು,

ಗ್ಯಾರೆಂಟಿ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ ಮಾತನಾಡಿ ಸರ್ಕಾರ ಬಡವರಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ, ಅದರಂತೆ ಮಹಿಳೆಯರಿಗೆ ಗೃಹಲಕ್ಷ್ಮಿ, ಗೃಹ ಜ್ಯೋತಿ, ಉಚಿತ ಬಸ್ ಪ್ರಯಾಣ ನೀಡಲಾಗುತ್ತಿದೆ ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಸರ್ಕಾರದಿಂದ ನೆರವನ್ನ ನೀಡುವುದರ ಮೂಲಕ ತಮ್ಮ ಅಭಿವೃದ್ಧಿಗಾಗಿ ಶ್ರಮಿಸುತ್ತಿವೆ ಎಂದು ತಿಳಿಸಿದರು.

ಸೊಂಡೆಕೊಳ ಗ್ರಾಮದ ರೈತ ಮಾಸಿರಪ್ಪ ಮಾತನಾಡಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಕಡೆಗೆ ಸಾಗುತ್ತಿದೆ, ಬಹು ವರ್ಷಗಳ ಅಭಿವೃದ್ಧಿಯ ಕಾಣದೇ ಇರುವಂತಹ ಗ್ರಾಮಗಳು ಪ್ರಸ್ತುತ ದಿನಮಾನಗಳಲ್ಲಿ ಅಭಿವೃದ್ಧಿ ಕಡೆಗೆ ಸಾಗುತ್ತಿವೆ, ಜನರ ಸಮಸ್ಯೆಗಳನ್ನು ಅರಿತವನ್ನು ನಿಜವಾದ ಜನ ಸೇವಕ ಅಂತಹ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿರುವಂತಹ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರಿಗೆ ನಾವು ಆಭಾರಿಯಾಗಿರುತ್ತೇವೆ ಎಂದು ಶುಭವನ್ನ ಹಾರೈಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಇಂಜಿನಿಯರ್ಗಳಾದ ವಿನಾಯಕ್, ಶರತ್ ಕೆ.ಡಿ.ಪಿ ಸದಸ್ಯರಾದ ಸಂತೋಷ್, ನಾಗರಾಜ್, ಶಾಸಕರ ವಿಶೇಷ ಕರ್ತವ್ಯ ಅಧಿಕಾರಿ ಸತ್ಯನಾರಾಯಣ, ಗ್ರಾಮಸ್ಥರಾದ ತಿಪ್ಪಣ್ಣ, ಶಶಿಕುಮಾರ್, ಶ್ರೀನಿವಾಸ್, ವಿಶ್ವನಾಥ್, ಸೋಮಪ್ಪ, ತಿಮ್ಮಪ್ಪ, ಅವಿನಾಶ್, ಗಿರೀಶ್, ವೀರೇಶ್, ರಾಜಪ್ಪ, ನಾಗರಾಜ್, ಧನಂಜಯ್, ತಿಪ್ಪೇಸ್ವಾಮಿ, ಮಧು, ಮಾರಣ್ಣ, ಮಹಾಂತೇಶ್, ಚಂದ್ರಣ್ಣ, ಗಿರೀಶ್, ತಿಪ್ಪೇಸ್ವಾಮಿ, ಮಂಜುನಾಥ್, ಶಿವಣ್ಣ, ಓಬಳೇಶ್, ಮಾದೇಶ್, ರಾಜಣ್ಣ, ಯೋಗೇಶ್ ಕುಮಾರ್, ಮಂಜುನಾಥ್, ನಾಗರಾಜ್, ಚಂದ್ರಶೇಖರ್, ಕಲ್ಲೇಶ್, ರಾಮಚಂದ್ರಪ್ಪ ಹಾಗೂ ಇತರರು ಇದ್ದರು.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon