ಮಹಾರಾಷ್ಟ್ರ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ನಡೆದ ಬಿಜೆಪಿ ಕೋರ್ ಕಮಟಿ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಹೆಸರು ಅಂತಿಮವಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ. ನಾಳೆ ಡಿಸೆಂಬರ್ 5ರಂದು ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸದ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ನಂತರ ಮಹಾಯುತಿಯ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
