ಧರ್ಮಸ್ಥಳ: ನಿನ್ನೆ (ಜುಲೈ 28) 13 ಶವಗಳನ್ನು ಹೂತಿಡಲಾಗಿದೆ ಎಂದು ಹೇಳಲಾಗುತ್ತಿದ್ದ ಧರ್ಮಸ್ಥಳದ ಪ್ರದೇಶದಲ್ಲಿ ಇಂದು ಮಣ್ಣು ಅಗೆದು ಶೋಧ ಕಾರ್ಯವನ್ನು ಆರಂಭಿಸಲಾಗಿದೆ. ಶವಗಳ ಗುರುತು ಪತ್ತೆ ಹಚ್ಚುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ನಿನ್ನೆ ರಾತ್ರಿಯೇ ಸ್ಥಳಕ್ಕೆ ಪೊಲೀಸರನ್ನು ನಿಯೋಜಿಸಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಇಂದು ಬೆಳಿಗ್ಗೆಯಿಂದ ಕಂದಾಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಶೋಧ ಕಾರ್ಯಾಚರಣೆ ಶುರುವಾಗಿದೆ. ದೂರುದಾರರ ಸಮ್ಮುಖದಲ್ಲೇ ಮಣ್ಣು ಅಗೆಯುವ ಕಾರ್ಯ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರೀ ಭದ್ರತೆಯನ್ನು ಏರ್ಪಡಿಸಲಾಗಿದೆ.
ಪ್ರಕರಣದ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.