ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಎರಡನೇ ಬಾರಿ ಸ್ವ ಇಚ್ಛಾ ಹೇಳಿಕೆ ನೀಡಿದ್ದಾನೆ.
ಈ ಹಿಂದೆ ಕೋರ್ಟ್ ನಲ್ಲಿ ಸುಳ್ಳು ಹೇಳಿದ್ದಾಗಿತಪ್ಪೊಪ್ಪಿಕೊಂಡಿರುವ ಘಟನೆ ನಡೆದಿದೆ. ಬಿಎನ್ ಎಸ್ 183ರಡಿ ಜಡ್ಜ್ ಮುಂದೆ ಹೇಳಿಕೆ ನೀಡಿದ್ದಾನೆ. ನನಗೆ ಬೆದರಿಕೆ ಹಾಕಿದ್ದರಿಂದ ಈ ಹಿಂದೆ ಸುಳ್ಳು ಸ್ಟೇಟ್ ಮೆಂಟ್ ಕೊಟ್ಟಿದ್ದೆ. ಈಗ ಸತ್ಯ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾನೆ. ಸೆಪ್ಟೆಂಬರ್ 25ರಂದು ಕೋರ್ಟ್ ಗೆ ಹಾಜರು ಪಡಿಸಿದ್ದಾಗ ಚಿನ್ನಯ್ಯ ನ್ಯಾಯಾಧೀಶರ ಮುಂದೆ ಈ ಹೇಳಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ.