ಧರ್ಮಸ್ಥಳದಲ್ಲಿ ತಲೆಬುರುಡೆ ಪ್ರಕರಣಕ್ಕೆ ಸಂಬOಧಿಸಿ ಮುಂದಿನ ಕ್ರಮಕ್ಕಾಗಿ ಎಸ್‌ಐಟಿಯು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ವರದಿ ಮೇಲಿನ ವಿಚಾರಣೆ ಪೂರ್ಣಗೊಂಡಿದ್ದು, ಡಿ. 26ಕ್ಕೆ ಕಾಯ್ದಿರಿಸಿದ್ದ ಆದೇಶದ ದಿನವನ್ನು ಡಿ. 29ಕ್ಕೆ ನ್ಯಾಯಾಲಯ ಮುಂದೂಡಿದೆ.
ಬೆಳ್ತಂಗಡಿ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆನ.20ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ ವರದಿ ಸಲ್ಲಿಸಿದ್ದರು. ಇನ್ನು, ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಶುಕ್ರವಾರ ಹಾಜರಾಗಿದ್ದಾನೆ.
ಚಿನ್ನಯ್ಯ ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಡಿ.26 ರಂದು 12 ಗಂಟೆಗೆ ನ್ಯಾಯಾಲಯಕ್ಕೆ ಹಾಜರಾಗಿ ಎಸ್‌ಐಟಿ ಕಚೇರಿಗೆ ಸಹಿ ಹಾಕಿ ತೆರಳಿದ್ದಾನೆ. ಪ್ರಕರಣಕ್ಕೆ ಸಂಬOಧಿಸಿ ಎಸ್‌ಐಟಿ ವಶಪಡಿಸಿಕೊಂಡಿರುವ ತಮ್ಮ ಮೊಬೈಲ್ ಫೋನ್‌ಗಳನ್ನು ಬಿಟ್ಟುಕೊಡಲು ಸೂಚಿಸಬೇಕು ಎಂದು ಉಜಿರೆಯ ಗಣೇಶ್ ಶೆಟ್ಟಿ ಮತ್ತು ಸೌಜನ್ಯಾ ಪರ ಹೋರಾಟಗಾರ ಗಿರೀಶ್ ಮಟ್ಟೆಣ್ಣನವರ ಬೆಳ್ತಂಗಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ಈ ಕುರಿತ ವಿಚಾರಣೆಯನ್ನು ಡಿ.29ಕ್ಕೆ ಮುಂದೂಡಲಾಗಿದೆ.
ಎಸ್‌ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯ ಪ್ರತಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ಕೈ ಸೇರಿದೆ. ಎಸ್‌ಐಟಿ 3,923 ಪುಟಗಳ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿ 1,100 ಪುಟಗಳ ಪ್ರತಿಯನ್ನು ನ್ಯಾಯಾಲಯವು ಜಯಂತ್‌ರಿಗೆ ನೀಡಿರುವುದಾಗಿ ತಿಳಿದುಬಂದಿದೆ.
































