ಬೆಂಗಳೂರು: ರನ್ಯಾಗೆ 15 ರಿಂದ 25 ಲಕ್ಷ ರೂ. ನೀಡಿದ್ದಾರಂತೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಪರಮೇಶ್ವರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರನ್ಯಾಗೆ 15 ರಿಂದ 25 ಲಕ್ಷ ರೂ. ನೀಡಿದ್ದಾರಂತೆ ಪರಮೇಶ್ವರ್. ಕುಟುಂಬದವರಿಗೆಂದು ಆ ಹಣ ಕೊಟ್ಟಿರಬಹುದು. ಆಕೆಯ ಮದುವೆಗೆ ಗಿಫ್ಟ್ ಮಾಡಿರಬಹುದು. ನಾನು ಅವರ ಬಳಿ ಮಾತಾಡಿದ್ದೇನೆ ಎಂದು ಹೇಳಿದರು.
ಪರಮೇಶ್ವರ್ ಆರೋಗ್ಯವಾಗಿದ್ದು, ಅವರ ಮೇಲೆ ಸಾಕಷ್ಟು ಜವಾಬ್ದಾರಿ ಇದೆ. ಅವರು ಗೌರವಾನ್ವಿತ ವ್ಯಕ್ತಿ, ನಾನು ಅವರ ಜೊತೆ ಇರುತ್ತೇನೆ. ಇನ್ನೂ, ರನ್ಯಾ ತಪ್ಪು ಮಾಡಿದ್ರೆ ಕ್ರಮ ಆಗಲಿ ಎಂದರು. ಆ ಮೂಲಕ ರನ್ಯಾಗೆ ಪರಮೇಶ್ವರ್ ಒಡೆತನದ ಸಂಸ್ಥೆಯಿಂದ ಹಣ ವರ್ಗಾವಣೆ ಮಾಡಿರುವ ವಿಚಾರವನ್ನು ಡಿ. ಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.