ರಾಜ್ಯದಲ್ಲಿ ಸಿಎಂ ಕುರ್ಚಿ ಬದಲಾವಣೆ ಚರ್ಚೆ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಕಾಲ ಸನ್ನಿಹಿತವಾದಂತಿದೆ.
ಶೀಘ್ರದಲ್ಲೇ ಎಲ್ಲಾ ರಾಜ್ಯಗಳ ಅಧ್ಯಕ್ಷರ ಬದಲಾವಣೆ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ.
ಇದರ ಚೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ‘ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ’ ಎಂದು ಟ್ವೀಟ್ ಮಾಡಿರುವುದು ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ಸದ್ಯಕ್ಕೆ ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಗೊಂದಲಗಳು ಉದ್ಭವಿಸಿವೆ.