ಚಿತ್ರದುರ್ಗ:ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‍ಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು.
ಪ್ರವೇಶ ಅರ್ಹತೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾμÉಯಾಗಿ ಅಭ್ಯಸಿಸಿ ಕನಿಷ್ಠ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು).
ದಿನಾಂಕ: 06-06-2025 ರಂದು ಅಭ್ಯರ್ಥಿಗಳ ಪಯಸ್ಸು 19 ವರ್ಷಗಳನ್ನು ಮೀರಿರದಾರದು, ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ(ಕೃಷಿ) ಪ್ರವೇಶಾಸಿಗೆ ಮೀಸಲಿಡಲಾಗಿದೆ. ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್ ಸೈಟ್ www.nahs.edu.in ನಲ್ಲಿ ದಿನಾಂಕ: 06-05-2025 ರಿಂದ 06-06-2025 ರವರೆಗೆ ಡೌನ್ ಲೋಡ್ ಮಾಡಬಹುದು.
ಈ ರೀತಿ ವೆಬ್‍ಸೈಟ್ ಮುಖಾಂತರ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ: 06-06-2025 ರೊಳಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕೆ ಅವರಣ- 577, 412/ಇಲ್ಲಿಗೆ ಕಳುಹಿಸಿಕೊಡಬೇಕು, ದಿನಾಂಕ: 06-06-2025 ರ ನಂತರ ಡಿ.ಡಿ. ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ರೂ. 500/-, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250/- ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್‍ಗಳ (Nationalized Bank) ಡಿ.ಡಿ.ಯನ್ನು Comptroller, KSNUAHS, Shivamogga – 577 412 ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿಮಾಡಿದ ಅರ್ಜಿಗಳನ್ನು ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ-577412 ಇಲ್ಲಿಗೆ ಜೂನ್ 06ರ ಸಂಜೆ 4 ಗಂಟೆಯೊಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು. ಜೂನ್ 06ರ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರವೇಶ ಆಯ್ಕೆ ವಿಧಾನ: ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿಯನ್ನು ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್‍ಸೈಟ್ ಮುಖಾಂತರ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.