ಚಿತ್ರದುರ್ಗ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲಭ್ಯವಿರುವ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶ ಸ್ಥಾನಗಳನ್ನು ಹಾಗೂ ರಾಜ್ಯದ ಆಯ್ದ 26 ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಲಭ್ಯವಿರುವ ಸ್ಥಾನಗಳು ಇವೆ.
ಮೆರಿಟ್ ಕಮ್ ರೊಸ್ಟರ್ ಪ್ರಕಾರ ರಾಜ್ಯ ಮಟ್ಟದಲ್ಲಿ ನಾನ್ ಇಂಟರ್ ಆಕ್ಟೀವ್ ಕೌನ್ಸೆಲಿಂಗ್ ಮೂಲಕ ಭರ್ತಿ ಮಾಡಲು, ಡಿಪ್ಲೋಮಾ ವ್ಯಾಸಂಗ ಮಾಡಲು ಬಯಸುವ ಅರ್ಹ ಅಭ್ಯರ್ಥಿಗಳಿಂದ (ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ) ಅರ್ಜಿಗಳನ್ನು ಸ್ವೀಕರಿಸಲು ಅಂತಿಮ ದಿನಾಂಕವನ್ನು ಇದೇ ಮೇ.22 ರವರೆಗೆ ವಿಸ್ತರಿಸಲಾಗಿದೆ ಎಂದು ಚಿತ್ರದುರ್ಗ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಬಿ. ರಮೇಶ ತಿಳಿಸಿದ್ದಾರೆ.