Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಡಿಪ್ಲೊಮಾ ಪ್ರವೇಶಾತಿ: ವಿಶೇಷಚೇತನರಿಂದ ಅರ್ಜಿ ಆಹ್ವಾನ

0

 

ಚಿತ್ರದುರ್ಗ : ಮೈಸೂರು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2023-24ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟ್‍ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ ಸೈನ್ಸ್ ಮತ್ತು ಇಂಜಿನಿಯರಿಂಗ್ ಹಾಗೂ ಅನುದಾನ ರಹಿತ ಕೋರ್ಸುಗಳಾದ  ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲೀಕೇಷನ್ಸ್, ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸುಗಳಿಗೆ ವಿಶೇಷಚೇತನರು ಅರ್ಜಿ ಸಲ್ಲಿಸಬಹುದು.

ಪ್ರವೇಶಾರ್ಹತೆ:  ಕರ್ನಾಟಕ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ಶೇ.35 ಅಂಕಗಳೊಂದಿಗೆ ತೇರ್ಗಡೆ ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ ಶೇ.40 ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ 60 ಡಿಬಿ ಮತ್ತು ಮೇಲ್ಪಟ್ಟು, ಭಾಗಶಃ ಮತ್ತು ಪೂರ್ಣ ಅಂಧತ್ವ 6/60 ಅಥವಾ 20/200 ಸ್ನೆಲೆನ್ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‍ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರುಗಳಿಗೆ  ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.

ಪ್ರವೇಶಕ್ಕೆ ಅರ್ಜಿಗಳನ್ನು  ಸಮಾನ್ಯ ವರ್ಗದ ಅಭ್ಯರ್ಥಿಗಳು ರೂ100/ ಹಾಗೂ SC/ST/C-1   ವರ್ಗದವರಿಗೆ ರೂ 50/ ನಗದು ಅಥಾವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ  ಅರ್ಜಿ ಪಡೆಯಯಬಹುದು ಅಥಾವಾ ವೆಬ್ ಸೈಟ್ ಮೂಲಕ ಜoತಿಟಿಟoಜ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.jsspda.org /  ದೂರವಾಣಿ ಸಂಖ್ಯೆ 9844644937 ಗೆ ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 17 ರೊಳಗೆ ಕಚೇರಿಗೆ ತಲುಪಿಸಬೇಕೆಂದು ಮೈಸೂರಿನ ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.

Leave A Reply

Your email address will not be published.