8 ಕೆರೆಗಳಿಗೆ ಭದ್ರ ನೀರು ಹರಿಸುವುದಕ್ಕೆ ಡಿಕೆ ಗ್ರೀನ್ ಸಿಗ್ನಲ್ : ಶಾಸಕ ಕೆ. ಸಿ ವೀರೇಂದ್ರ ಪಪ್ಪಿ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಭರಮಸಾಗರ ಏತ ನೀರಾವರಿ ಯೋಜನೆ ಅಡಿಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರನ್ನು ತುಂಬಿಸಲಾಗುತ್ತಿದೆ, ಇದರ ಅನ್ವಯ ಈ ಯೋಜನೆಯಲ್ಲಿ ಕ್ಷೇತ್ರದ ಕೆಲವು ಕೈ ಬಿಟ್ಟ ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿಯವರು ತಿಳಿಸಿದರು.

ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಗುರುವಾರ ಭೇಟಿ ಮಾಡಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ಕೈಬಿಟ್ಟಿರುವಂತಹ ಕೆರೆಗಳನ್ನ ಸೇರಿಸಿ ರೈತರಿಗೆ ಅನುಕೂಲ ಮಾಡಿಕೊಡುವಂತೆ ಉಪಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಗಿತ್ತು, ಭರಮಸಾಗರದ ಮುಖ್ಯ ಕೆರೆಯಿಂದ ವಿವಿಧ ಕೆರೆಗಳಿಗೆ ಈಗಾಗಲೇ ನೀರನ್ನ ಬಿಡಲಾಗುತ್ತಿದೆ, ಅದರಂತೆ ಚಿತ್ರದುರ್ಗ ತಾಲೂಕಿನ ಮಠದ ಕುರುಬರಹಟ್ಟಿ ಕೆರೆ, ಕಾಟಿಹಳ್ಳಿ ಕೆರೆ, ಸಿದ್ದಾಪುರ ಕೆರೆ, ಮಾನಂಗಿ ಕೆರೆ, ಹುಲ್ಲೂರು ಕೆರೆ, ತಿಮ್ಮಣ್ಣನಾಯಕನ ಕೆರೆ, ನಂದೀಪುರ ಕೆರೆ ಮತ್ತು ಅನ್ನೇಹಾಳು ಕೆರೆಗಳನ್ನ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಸೇರ್ಪಡೆಮಾಡಿ ಕೆರೆಗಳನ್ನ ತುಂಬಿಸಬೇಕು, ಭದ್ರ ಮೇಲ್ದಂಡೆ ಯೋಜನೆಯಲ್ಲಿರು ಚಿತ್ರದುರ್ಗ ತಾಲ್ಲೂಕಿನ ಒಟ್ಟು 28966 ಹೆಚ್ಚುವರಿ ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ ಮುಖಾಂತರ ನೀರಾವರಿ ಸೌಲಭ್ಯ ಕಲ್ಪಿಸಿ 09 ಕೆರೆಗಳನ್ನು ಮಾತ್ರ ತುಂಬಿಸಲು ಡಿ.ಪಿ.ಆರ್ ನಲ್ಲಿ ಯೋಜಿಸಲಾಗಿರುತ್ತದೆ ಎಂದು ತಿಳಿಸಿದರು.

ಮಹತ್ವದ ಯೋಜನೆ ಅಡಿಯಲ್ಲಿ ಕೆರೆಗಳನ್ನ ತುಂಬಿಸುವುದರಿಂದ ಈ ಗ್ರಾಮಗಳ ವ್ಯಾಪ್ತಿಯಲ್ಲಿ ಅಂರ್ತಜಲ ಮಟ್ಟ ಹೆಚ್ಚಾಗುವುದಲ್ಲದೇ ಜನ ಜಾನುವಾರುಗಳಿಗೆ ಕೂಡ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ ಎಂದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ರವರು  ಉಪ ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿದರು.

ಮನವಿಯನ್ನ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಕೈಬಿಟ್ಟ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ಅತಿ ಶೀಘ್ರದಲ್ಲೇ ಮಾಡಲಾಗುವುದು, ಮುಂದಿನ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ರೈತಪಿ ವರ್ಗದವರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon