2004ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರು 1971ರಲ್ಲಿ ವಾಣಿಜ್ಯ ಸಚಿವಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿ ಸರ್ಕಾರಕ್ಕೆ ಸೇರಿದರು.
ಇದರ ನಂತರ 1972ರಲ್ಲಿ ಹಣಕಾಸು ಸಚಿವಾಲಯದ ಮುಖ್ಯ ಆರ್ಥಿಕ ಸಲಹೆಗಾರರಾಗಿ ನೇಮಕಗೊಂಡರು. ಅವರು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದರು.
ಸಿಂಗ್ ಅವರು 1991 ಮತ್ತು 1996ರ ನಡುವೆ ಹಣಕಾಸು ಸಚಿವರಾಗಿ ಐದು ವರ್ಷಗಳ ಸೇವೆ ಸಲ್ಲಿಸಿದ್ದರು.