ನೀವು ಕುರಿ ಸಾಕಾಣಿಕೆ ಮತ್ತು ಫುಡ್ ಕಾರ್ಟ್ ಸಾಲ-ಸೌಲಭ್ಯ ಬೇಕಾ.?

WhatsApp
Telegram
Facebook
Twitter
LinkedIn

 

ಬೆಂ.ಗ್ರಾ.ಜಿಲ್ಲೆ,: ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗಳಡಿ ‘ಕುರಿ ಸಾಕಾಣಿಕೆ’ ಉದ್ದೇಶಕ್ಕೆ ರೂ. 1 ಲಕ್ಷ (ರೂ. 50000 ಸಾಲ ಮತ್ತು ರೂ.50000 ಸಹಾಯಧನ) ಹಾಗೂ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ‘ಫುಡ್ ಕಾರ್ಟ್’ ಉದ್ದೇಶಕ್ಕೆ ಬ್ಯಾಂಕ್ ಸಹಯೋಗದೊಂದಿಗೆ ಗರಿಷ್ಟ 4 ಲಕ್ಷದವರೆಗೂ ಸಾಲ ಸೌಲಭ್ಯ ಕಲ್ಪಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಡಿಸೆಂಬರ್ 29 ರೊಳಗೆ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ 21 ರಿಂದ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. 2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕು ಅಭಿವೃದ್ಧಿ ಅಧಿಕಾರಿಗಳನ್ನು ದೇವನಹಳ್ಳಿ ತಾಲೂಕು- 8050854019, ದೊಡ್ಡಬಳ್ಳಾಪುರ ತಾಲೂಕು- 8050854020, ಹೊಸಕೋಟೆ ತಾಲೂಕು- 8050854021, ನೆಲಮಂಗಲ ತಾಲೂಕು- 8050854022 ಹಾಗೂ ನಿಗಮದ ವೆಬ್ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon