ವಾಷಿಂಗ್ಟನ್ : ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ 2.0 ಸರ್ಕಾರ ಆಡಳಿತ ನಡೆಸಲಿದೆ. 47ನೇ ಯುಎಸ್ ಅಧ್ಯಕ್ಷರಾಗಿ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಾಧ್ಯಕ್ಷರಾಗಿ ಜೆ.ಡಿ.ವ್ಯಾನ್ಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಪ್ರಮಾಣ ವಚನ ಬೋಧಿಸಿದ್ದಾರೆ. ಭಾರತೀಯ ಕಾಲಮಾನ ರಾತ್ರಿ 10:30ಕ್ಕೆ ಸರಿಯಾಗಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷ ಪದವಿಗೆ ಏರಿದರು.
ನಾಲ್ಕು ವರ್ಷದ ಹಿಂದೆ ಅಧಿಕಾರ ಹಸ್ತಾಂತರ ಸಂದರ್ಭದಲ್ಲಿ ಟ್ರಂಪ್ ಬೆಂಬಲಿಗರು ಹಂಗಾಮಾ ಸೃಷ್ಟಿಸಿದ್ದ ಕ್ಯಾಪಿಟಲ್ ಭವನದಲ್ಲೇ ಟ್ರಂಪ್ ಪದಗ್ರಹಣ ಸಮಾರಂಭ ನಡೀತಿದೆ. ಭಾರೀ ಚಳಿ ಕಾರಣ, 1985ರ ಬಳಿಕ ಇದೇ ಮೊದಲ ಬಾರಿಗೆ ಕ್ಯಾಪಿಟಲ್ ಭವನದ ಒಳಾಂಗಣದಲ್ಲಿ ಕಾರ್ಯಕ್ರಮ ನಡೆದಿದೆ.
ಸಮಾರಂಭದಲ್ಲಿ ಪ್ರಧಾನಿ ಮೋದಿ ಪರವಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾಗವಹಿಸಿದ್ದರು. ಅಲ್ಲದೇ, ಉದ್ಯಮಿಗಳಾದ ಮುಕೇಶ್ ಅಂಬಾನಿ ದಂಪತಿ ಹಾಗೂ ಎಲಾನ್ ಮಸ್ಕ್ ಕೂಡ ಸಮಾರಂಭದಲ್ಲಿ ಉಪಸ್ಥಿತರಿದ್ದರು.