ನ್ಯೂಯಾರ್ಕ್: ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್ ಆರೋಪ ಪ್ರಕರಣದ ವಿಚಾರಣೆ ಎದುರಿಸಿದ, ಬಂಧನಕ್ಕೆ ಒಳಗಾದ ಮೊದಲ ಅಧ್ಯಕ್ಷ ಟ್ರಂಪ್ ಆಗಿದ್ದಾರೆ.
ಏಕೆಂದರೆ, ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ್ದ ಕ್ರಿಮಿನಲ್ ಪ್ರಕರಣದ ಸಂಬಂಧ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಇದಕ್ಕೂ ಮುನ್ನ ಮ್ಯಾನ್ಹಾಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ 76 ವರ್ಷ ವಯಸ್ಸಿನ ಟ್ರಂಪ್ ಶರಣಾದರು. ಬಳಿಕ ಅವರನ್ನು ಬಂಧಿಸಿ ಬಿಗಿ ಭದ್ರತೆಯಲ್ಲಿ ವಿಚಾರಣೆಗೆ ಕರೆದುಕೊಂಡು ಹೋಗಲಾಯಿತು ಎಂದು ಬಿಬಿಸಿ ವರದಿ ಮಾಡಿದೆ.
ನಮ್ಮ ನಡುವಿನ ಅನೈತಿಕ ಸಂಬಂಧ ಬಹಿರಂಗಪಡಿಸಬಾರದು ಎಂದು ನೀಲಿಚಿತ್ರ ತಾರೆಯೊಬ್ಬರಿಗೆ ಹಣ ಸಂದಾಯ ಮಾಡಿದ್ದ ಕುರಿತಂತೆ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
‘ಕಾನೂನು ಸಲಹಾ ಸಿಬ್ಬಂದಿ ಜೊತೆ ಬಂದಿದ್ದ ಟ್ರಂಪ್ ಅವರು, ಕ್ರಿಮಿನಲ್ ಆರೋಪ ಪ್ರಕರಣದಲ್ಲಿ ನನ್ನ ತಪ್ಪಿಲ್ಲ. ನಾನು ನಿರ್ದೋಷಿ’ ಎಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜುವಾನ್ ಮರ್ಚನ್ ಅವರಿಗೆ ಮನವಿ ಸಲ್ಲಿಸಿದರು.
ಟ್ರಂಪ್ 2024ರ ಅಧ್ಯಕ್ಷೀಯ ಚುನಾವಣೆ ಸಿದ್ಧತೆಯಲ್ಲಿದ್ದು, ಎರಡನೇ ಬಾರಿಗೆ ಆಯ್ಕೆ ಬಯಸಿದ್ದಾರೆ. ಹೀಗಾಗಿ, ಈ ಬೆಳವಣಿಗೆ ಅಮೆರಿಕದಲ್ಲಿ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಗಳಿವೆ.