ಮನುಸ್ಮೃತಿಯ ಮನಸ್ಥಿತಿ ಹೋಗಲಾಡಿಸಿದ ಕ್ರಾಂತಿ ಪುರುಷ ಡಾ.ಬಿ.ಆರ್.ಅಂಬೇಡ್ಕರ್ ಶಾಸಕ ಕೆ.ಸಿ.ವೀರೇಂದ್ರ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಮನುಸ್ಮೃತಿ ಪ್ರತಿಪಾದಿಸಿದ ಅಸಮಾನತೆಯ ಮನಸ್ಥಿತಿ ಹೋಗಲಾಡಿಸಿದ ಕ್ರಾಂತಿ ಪುರುಷ ಡಾ.ಬಿ.ಆರ್.ಅಂಬೇಡ್ಕರ್ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಬಣ್ಣಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರ ಸಭೆ ಸಹಯೋಗದಲ್ಲಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಎಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ, ಅವರೊಬ್ಬ ಕ್ರಾಂತಿ ಮತ್ತು ಚಳುವಳಿಯ ಶಕ್ತಿಯಾಗಿದ್ದಾರೆ. ಅಂಬೇಡ್ಕರ್ ಶಿಕ್ಷಣವನ್ನು ಪ್ರಮುಖ ಅಸ್ತçವೆಂದು ನಂಬಿದ್ದರು. ಶಿಕ್ಷಣ ಪುರುಷರಿಗೆ ಸೀಮಿತವಾಗದೆ, ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೂ ಸಮಾನವಾಗಿ ಸಿಗಬೇಕು ಎಂಬುದು ಅವರ ಆಶಯವಾಗಿತ್ತು. ಅಂಬೇಡ್ಕರ್ ಅವರನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ವಿಷಾದಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, “ಅಂಬೇಡ್ಕರ್ ಅಂದರೆ ಅದೊಂದು ವ್ಯಕ್ತಿಯಲ್ಲ, ಅದೊಂದು ಕ್ರಾಂತಿ ಮತ್ತು ಚಳವಳಿ. ಅಸ್ಪೃಶ್ಯತೆ ಎಂಬ ಅಸಮಾನತೆಯನ್ನು ಹೋಗಲಾಡಿಸಲು ಅವರು ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟಿದ್ದರು. ಅವರು ದೇಶದ ಪ್ರತಿಯೊಬ್ಬರಿಗೂ ಮತ್ತು ಎಲ್ಲಾ ಸಮುದಾಯಗಳಿಗೂ ಸೇರಿದ ನಾಯಕರಾಗಿದ್ದಾರೆ” ಎಂದು ಶಾಸಕರು ಸ್ಮರಿಸಿದರು.

ಅಂಬೇಡ್ಕರ್ ಅವರ ಸಂವಿಧಾನ ರಚನೆಯ ಕೊಡುಗೆಯ ಜೊತೆಗೆ, ದೇಶದ ನೀರಾವರಿ ಕ್ಷೇತ್ರಕ್ಕೆ ಮುನ್ನೋಟ ಒದಗಿಸಿದರು. ನದಿ ಜೋಡಣೆಯ ಪರಿಕಲ್ಪನೆಯನ್ನು ಮೊಟ್ಟಮೊದಲ ಬಾರಿಗೆ ಪ್ರತಿಪಾದಿಸಿದವರು ಅಂಬೇಡ್ಕರ್ ಅವರನ್ನು ‘ಭಾರತೀಯ ಜಲ ನೀತಿಯ ಪಿತಾಮಹ’ ಎಂದು ಕರೆಯಲಾಗುತ್ತದೆ. ಜಲಸಂಪನ್ಮೂಲಗಳ ಅಭಿವೃದ್ಧಿಗೆ ಅಂಬೇಡ್ಕರ್ ಅಡಿಪಾಯ ಹಾಕಿದರು.  ಶಿಕ್ಷಣ, ಸಂಘಟನೆ, ಹೋರಾಟ ಎಂಬ ಅಂಬೇಡ್ಕರ್ ಸಂದೇಶವು ಇಂದಿನ ಬದುಕಿಗೆ ದಾರಿದೀಪವಾಗಿದೆ. ಸರ್ಕಾರ ಜಾರಿಗೆ ತಂದಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತೆ ಯೋಜನೆ, ಸ್ವಾಲಂಬಿ ಸಾರಥಿ ಹಾಗೂ ಗಂಗಾ ಕಲ್ಯಾಣ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್ ಪೀರ್ ಮಾತನಾಡಿ, ಭಾರತದಂತಹ ವೈವಿಧ್ಯಮಯ ರಾಷ್ಟçದಲ್ಲಿ ಸರ್ವ ಧರ್ಮದವರು ಸಮಾನತೆಯಿಂದ ಬಾಳಲು ಸಂವಿಧಾನವೇ ಅತಿದೊಡ್ಡ ಶಕ್ತಿಯಾಗಿದೆ ಎಂದು ಹೇಳಿದರು.

ಶತಮಾನಗಳಿಂದ ವಂಚಿತರಾಗಿದ್ದ ಮಹಿಳೆಯರು ಇಂದು ಶಿಕ್ಷಣ, ಉದ್ಯೋಗ, ದೇಶ ಸೇವೆ ಮತ್ತು ರಕ್ಷಣಾ ವಲಯಗಳಲ್ಲಿ ಪುರುಷರಿಗೆ ಸಮಾನವಾಗಿ ನಿಲ್ಲಲು ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವೇ ಕಾರಣ. ಸಂವಿಧಾನದ ಪೀಠಿಕೆಯನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ದೇಶದ ಏಕತೆ ಮತ್ತು ಒಗ್ಗಟ್ಟನ್ನು ಕಾಪಾಡಬೇಕು ಎಂದು ತಿಳಿಸಿದ ಅವರು, ಸೂರ್ಯ-ಚಂದ್ರರಿರುವವರೆಗೂ ಈ ಸಂವಿಧಾನ ಅಜರಾಮರವಾಗಿರಲಿ ಮತ್ತು ದೇಶದ ಐಕ್ಯತೆ ಹೀಗೆ ಮುಂದುವರಿಯಲಿ ಎಂದು ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ‘ವಿಶ್ವಕ್ಕೆ ಮಾದರಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ರೂಪಿಸಿ, ಸಮಾನ ಪಾಲು ಮತ್ತು ಸಮಾನ ಬಾಳಿನ ಹಕ್ಕು ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತಿದೆ’ ಎಂದರು.

ದೇಶದ ಕಾನೂನು ವ್ಯವಸ್ಥೆಯಲ್ಲಿ ಬದುಕುವ ಶಕ್ತಿಯನ್ನು ಕಲ್ಪಿಸಿಕೊಟ್ಟ ಮಹಾನ್ ನಾಯಕ ಅಂಬೇಡ್ಕರ್. ಅವರ ಜನಪರ ಆಡಳಿತದ ಯೋಜನೆಗಳು ಇಂದು ಇಡೀ ಜಗತ್ತಿಗೆ ದಾರಿದೀಪವಾಗಿವೆ ಎಂದು ಅಭಿಪ್ರಾಯಪಟ್ಟರು.

ಚಳ್ಳಕೆರೆ ಹೆಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕ ಡಾ.ಕೆ.ಆರ್.ಜೆ.ರಾಜಕುಮಾರ್ ಉಪನ್ಯಾಸ ನೀಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನವು ನಮ್ಮೆಲ್ಲರಿಗೂ ಗೌರವಯುತವಾಗಿ ಬದುಕುವ ಹಕ್ಕನ್ನು ನೀಡಿದೆ ಎಂದು ಹೇಳಿದರು.

ದೇಶದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಸಮಾನತೆ ನೆಲೆಸದ ಹೊರತು ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರö್ಯಕ್ಕೆ ಪೂರ್ಣ ಅರ್ಥ ಬರುವುದಿಲ್ಲ. ಸಂವಿಧಾನದ ಆಶಯಗಳು ಈಡೇರಿದಾಗ ಮಾತ್ರ ಸ್ವಾತಂತ್ರö್ಯಕ್ಕೆ ಅರ್ಥ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

ಸಂವಿಧಾನ ರಚನಾ ಸಭೆಗೆ ಅಂಬೇಡ್ಕರ್ ಅವರ ಪ್ರವೇಶ ಸುಲಭವಾಗಿರಲಿಲ್ಲ. ಜಾತಿವಾದಿ ಶಕ್ತಿಗಳು ಅವರನ್ನು ತಡೆಯಲು ಪ್ರಯತ್ನಿಸಿ ಮುಂಬೈ ಪ್ರಾಂತ್ಯದಲ್ಲಿ ಸೋಲಿಸಿದರೂ, ಅವರು ಬಂಗಾಳದ ಮೂಲಕ ಸಭೆ ಪ್ರವೇಶಿಸಿ ಶೋಷಿತರ ಪರವಾಗಿ ಧ್ವನಿ ಎತ್ತಿದರು. ಅಂಬೇಡ್ಕರ್ ಅವರ ಅಪ್ರತಿಮ ವಿದ್ವತ್ತು ಮತ್ತು ಕಾನೂನು ಜ್ಞಾನವನ್ನು ಪರಿಗಣಿಸಿ ಅವರನ್ನು ಕರಡು ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಯಿತು. ಸಮಿತಿಯ ಇತರ ಸದಸ್ಯರು ವಿವಿಧ ಕಾರಣಗಳಿಂದ ಜವಾಬ್ದಾರಿಯಿಂದ ದೂರ ಉಳಿದಾಗ, ಸಂಪೂರ್ಣ ಶ್ರಮ ಹಾಕಿ ಸಂವಿಧಾನ ರಚಿಸಿದ ಕೀರ್ತಿ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಈ ಕಾರಣಕ್ಕಾಗಿಯೇ ಅವರನ್ನು ‘ಭಾರತ ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗುತ್ತದೆ ಎಂದು ತಿಳಿಸಿದರು.

ದಲಿತರು, ಮಹಿಳೆಯರು ಮತ್ತು ಬಡವರ ಸ್ಥಿತಿಗತಿಗಳು ಇಂದಿಗೂ ಪೂರ್ಣ ಸುಧಾರಿಸಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ವರ್ಗವು ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಬೇಕಿದೆ ಎಂದು ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಜನರಿಗಾಗಿ ಶ್ರಮಿಸಿರುವ ಸಾಧಕರಿಗೆ ಜಿಲ್ಲಾಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಮ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ತಹಶೀಲ್ದಾರ್ ಗೋವಿಂದರಾಜ್, ನಗರಸಭೆ ಪೌರಾಯುಕ್ತೆ ಎಸ್.ಲಕ್ಷಿö್ಮÃ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ, ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ ಸೇರಿದಂತೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ಪರಿಶಿಷ್ಟ ಜಾತಿ, ಪಂಗಡ, ಇತರೆ ಹಿಂದುಳಿದ ವರ್ಗಗಳ ಸಮುದಾಯದ ಮುಖಂಡರು ಇದ್ದರು.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon