ಬೆಂ. ಗ್ರಾ.: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.
ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ ಮಾತನಾಡಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬಡವರ ದೀನ ದಲಿತರ, ಶೋಷಿತ ವರ್ಗಗಳ ಅಭಿವೃದ್ಧಿಗೆ ದುಡಿದರು. ಸಾಮಾಜದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಸಿಗಬೇಕು ಎನ್ನುವುದು ಅವರ ಆಶಯವಾಗಿತ್ತು. ಪ್ರತಿಯೊಬ್ಬರೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಮಾರ್ಗದರ್ಶನ ಹಾಗೂ ಸಂವಿಧಾನದ ಆಶಯಗಳನ್ನು ಪಾಲಿಸೋಣ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಎಚ್. ಅಮರೇಶ್, ಜಿ ಪಂ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ ಎಲ್ ಪ್ರೇಮಾ ಸೇರಿದಂತೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.