ದರ್ಶನ್ ಜಾಮೀನು ರದ್ದು ಪಡಿಸಲು ಕೋರ್ಟ್‌ಗೆ ಮನವಿ : ಡಾ.ಜಿ.ಪರಮೇಶ್ವರ್

WhatsApp
Telegram
Facebook
Twitter
LinkedIn

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ನಡೆದ ಜಾಗದಲ್ಲಿ ನಟ ದರ್ಶನ್ ಇರುವ ಫೋಟೋ ಪೊಲೀಸರಿಗೆ ಸಿಕ್ಕಿರುವ ಹಿನ್ನೆಲೆ ಅದನ್ನು ನ್ಯಾಯಾಲಯದ ಮುಂದೆ ಸಲ್ಲಿಸಿ ಮಧ್ಯಂತರ ಜಾಮೀನು ರದ್ದತಿಗೆ ಮನವಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾತಾಡಿದ ಅವರು, ದರ್ಶನ್ ಜತೆಗಿದ್ದ ಇತರೆ ಆರೋಪಿಗಳ ಮೊಬೈಲ್ ಫೋನ್ ಗಳನ್ನು ಎಫ್ ಎಸ್ ಎಲ್ ವರದಿಗಾಗಿ ಹೈದರಾಬಾದ್ ಗೆ ಕಳುಹಿಸಲಾಗಿತ್ತು.

ಕೊಲೆ ನಡೆದ ಸ್ಥಳದಲ್ಲಿ ದರ್ಶನ್ ಇರುವ ಫೋಟೋಗಳು ಲಭ್ಯವಾಗಿದೆ. ಮೇಲ್ನೋಟಕ್ಕೆ ದರ್ಶನ್ ಪಾತ್ರ ದೊಡ್ಡದಾಗಿ ಕಾಣುತ್ತಿದೆ. ಹೀಗಾಗಿ ದರ್ಶನ್ ಜಾಮೀನು ರದ್ದು ಮಾಡುವಂತೆ ಕೋರ್ಟ್‌ ಗೆ ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. ದರ್ಶನ್ ಬೆನ್ನು ಆಪರೇಶನ್ ಮಾಡಿಸಿಲ್ಲ. ಹಾಗೆಯೇ ಕಾಲ ಕಳೆಯುತ್ತಿದ್ದಾರೆ. ದರ್ಶನ್ ಗೆ ಆಪರೇಷನ್ ಅಗತ್ಯ ಇಲ್ಲ ಎಂದು ಇದರಿಂದ ಗೊತ್ತಾಗುತ್ತದೆ. ಆಪರೇಷನ್ ಮಾಡದಿದ್ದರೆ ಬೆನ್ನುಮೂಳೆ ಮುರಿದು ಹೋಗುತ್ತದೆ ಎಂದು ಹೇಳುತ್ತಿದ್ದರು. ಇಷ್ಟು ದಿನವಾದರೂ ವೈದ್ಯರು ಆಪರೇಷನ್ ಮಾಡಿಲ್ಲ, ಕೋರ್ಟ್ ಈ ಬಗ್ಗೆ ಗಮನ ಹರಿಸಿ ಸೂಕ್ತ ಆದೇಶ ನೀಡಬೇಕು ಎಂದರು.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon