ಚಿತ್ರದುರ್ಗ: ಸಿರಿಗೆರೆ ಸಮೀಪದ ಕಡ್ಲೆಗುದ್ದು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಾ.ಮಹೇಶ್ ಅವರು ಅಕ್ಷಯ ಪ್ರಾರ್ಥನಾ ಫೌಂಡೇಶನ್ ಹೈದರಾಬಾದ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ರಾಷ್ಟ್ರಮಟ್ಟದ ಭಾರತ ಸೇವಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಡಾ ಮಹೇಶ್ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ, ಭಾರತ ಸೇವಾರತ್ನ ಪ್ರಶಸ್ತಿಗೆ ಆಯ್ಕೆಮಾಡಿದ್ದು, ಡಿ.29 ರಂದು ಬೆಳಿಗ್ಗೆ 10.30ಕ್ಕೆ ಗಾಂಧಿಭವನ ಬಾಪು ಸಭಾಂಗಣ ಬೆಂಗಳೂರಿನಲ್ಲಿ ಆಯೋಜಿಸಿರುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾರತ ಸೇವಾರತ್ನ 2024 ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಅಕ್ಷಯ ಪ್ರಾರ್ಥನಾ ಪೌಂಡೇಶನ್ ಅಧ್ಯಕ್ಷರಾದ ಬಿ.ಮಾದೇವಿ(ಸಿಂಧು ) ಹಾಗೂ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಮೋಹನ್ ಕಿಶೋರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.