ಬೆಂಗಳೂರು: ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, : ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸುತ್ತದೆ.
ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ. ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು.
ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.ಸದರಿ ಆದೇಶವು ನೆಗೋಷಿಯಬಲ್ ಇನ್ಸುಮೆಂಟ್ ಆಕ್ಟ್ 1881 ರ ಪ್ರಕಾರವು ಕೂಡಾ ಸಾರ್ವಜನಿಕ ರಜೆಯೆಂದು ಘೋಷಿಸಲಾಗಿದೆ ಎಂದು ಆದೇಶ ಹೊರಡಿಸಿದೆ.