ಕೊತ್ತಂಬರಿ ಅಥವಾ ಧನಿಯಾ ಒಂದು ಶಕ್ತಿಯುತ ಗಿಡಮೂಲಿಕೆಯಾಗಿದ್ದು, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಜೀರ್ಣ ಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಬಹಳ ಹಿಂದಿನ ಕಾಲದಿಂದಲೂ ಇದನ್ನು ಬಳಸುತ್ತಾ ಬಂದಿದ್ದಾರೆ. ಕೊತ್ತಂಬರಿ ಸೊಪ್ಪನ್ನು ರುಚಿಕರವಾದ ಚಟ್ನಿಯಲ್ಲಿ, ಸಾಂಬಾರು ಪದಾರ್ಥಗಳಲ್ಲಿ ಬಳಸಲಾಗುತ್ತದೆ. ಇದು ಜೀವಸತ್ವಗಳು, ಫೈಬರ್, ಖನಿಜಗಳು ಮತ್ತು ಆ್ಯಂಟಿ ಆಕ್ಸಿಡೆಂಟ್ಗಳಿಂದ ತುಂಬಿರುತ್ತದೆ. ಹಾಗಾಗಿ ಇದನ್ನು ಬಳಸಿ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.
ಕೊತ್ತಂಬರಿ ಸೊಪ್ಪಿನ ನೀರು ತಯಾರಿಸುವುದು ಹೇಗೆ?
ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ತೆಗೆದುಕೊಂಡು ಅದನ್ನು 500 ಮಿಲಿ ನೀರಿನಲ್ಲಿ 10 ನಿಮಿಷಗಳ ಕಾಲ ಕುದಿಸಿ, ನಂತರ ಅದನ್ನು ಉಗುರು ಬೆಚ್ಚಗಿರುವಾಗ ಸೋಸಿ ಕುಡಿಯಿರಿ.
ಕೊತ್ತಂಬರಿ ಸೊಪ್ಪಿನ ನೀರನ್ನು ಕುಡಿಯಲು ಸರಿಯಾದ ಸಮಯ ಯಾವುದು?
ಬೆಳಿಗ್ಗೆ ಅಥವಾ ಊಟಕ್ಕೆ 45 ನಿಮಿಷಗಳ ಮೊದಲು ಅಥವಾ ನಂತರ ನೀವು ಯಾವುದೇ ಸಮಯದಲ್ಲಿ ಕೊತ್ತಂಬರಿ ಸೊಪ್ಪಿನ ನೀರನ್ನು ಕುಡಿಯಬಹುದು.
ವಿಟಮಿನ್ ಎ ಮತ್ತು ವಿಟಮಿನ್ ಸಿ ಯ ಅತ್ಯುತ್ತಮ ಮೂಲ
ಕೊತ್ತಂಬರಿ ಸೊಪ್ಪು ವಿಟಮಿನ್ ಎ ಮತ್ತು ವಿಟಮಿನ್ ಸಿಯ ಅತ್ಯುತ್ತಮ ಮೂಲವಾಗಿದೆ. ಈ ಪೋಷಕಾಂಶಗಳ ಜತೆಗೆ ಇದು ಫೈಬರ್, ಕಬ್ಬಿಣ, ಮ್ಯಾಂಗನೀಸ್, ಕ್ಯಾಲ್ಸಿಯಂ, ವಿಟಮಿನ್ ಕೆ, ರಂಜಕ ಮುಂತಾದ ಪೋಷಕಾಂಶಗಳಿಂದ ತುಂಬಿದೆ.
ಕೊತ್ತಂಬರಿ ಸೊಪ್ಪಿನ ನೀರಿನ ಆರೋಗ್ಯ ಪ್ರಯೋಜನಗಳು
ದೃಷ್ಟಿಯನ್ನು ಸುಧಾರಿಸುತ್ತದೆ: ಕೊತ್ತಂಬರಿಯಲ್ಲಿ ವಿಟಮಿನ್ ಎ ಅಧಿಕವಾಗಿದೆ, ಇದು ನಿಮ್ಮ ರೆಟಿನಾಗಳನ್ನು ಪೋಷಿಸಲು ಸಹಾಯ ಮಾಡುತ್ತದೆ. ಇದು ನಿಮ್ಮ ಕಣ್ಣುಗಳಲ್ಲಿ ಸರಿಯಾದ ಪ್ರಮಾಣದ ತೇವಾಂಶವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್ ಎ ಜತೆಗೆ ವಿಟಮಿನ್ ಸಿ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸುತ್ತದೆ: ಮಧುಮೇಹ ಹೊಂದಿರುವ ಜನರಲ್ಲಿ ಕೊತ್ತಂಬರಿ ರಕ್ತದಲ್ಲಿನ ಸಕ್ಕರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದು ಸಂಶೋಧನೆಯಲ್ಲಿ ತೋರಿಸಲಾಗಿದೆ.
ಕೆಟ್ಟ ಕೊಲೆಸ್ಟ್ರಾಲ್ (ಎಲ್ಡಿಎಲ್) ಕಡಿಮೆ ಮಾಡುತ್ತದೆ: ಕೊತ್ತಂಬರಿ ಸೊಪ್ಪಿನಲ್ಲಿ ಅದ್ಭುತ ಸಂಯುಕ್ತಗಳಿವೆ, ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಮೂಳೆಯ ಆರೋಗ್ಯವನ್ನು ಬಲಪಡಿಸುತ್ತದೆ: ಕೊತ್ತಂಬರಿ ಸೊಪ್ಪು ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕಗಳಿಂದ ಸಮೃದ್ಧವಾಗಿದೆ, ಇದು ನಿಮ್ಮ ಮೂಳೆಯ ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ.
ಕರುಳಿನ ಆರೋಗ್ಯವನ್ನು ಹೆಚ್ಚಿಸುತ್ತದೆ: ಕೊತ್ತಂಬರಿ ಸೊಪ್ಪನ್ನು ತಿನ್ನುವುದು ಹಸಿವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯುಬ್ಬರ ಮತ್ತು ಇತರ ಹೊಟ್ಟೆಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಚರ್ಮದ ಆರೋಗ್ಯವನ್ನು ಉತ್ತೇಜಿಸುತ್ತದೆ: ಕೊತ್ತಂಬರಿ ಸೊಪ್ಪಿನಲ್ಲಿ ಪ್ರಬಲ ಆ್ಯಂಟಿ ಆಕ್ಸಿಡೆಂಟ್ಗಳಿವೆ. ಇದು ಚರ್ಮವನ್ನು ಹಾನಿಗೊಳಿಸುವ ಫ್ರೀ ರಾಡಿಕಲ್ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ: ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಹೊರತಾಗಿ, ಕೊತ್ತಂಬರಿ ಸೊಪ್ಪು ಮೂತ್ರವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ಇದು ನಿಮ್ಮ ದೇಹದಿಂದ ಹೆಚ್ಚುವರಿ ಸೋಡಿಯಂ ಅನ್ನು ತೆಗೆದುಹಾಕಲು ಮತ್ತು ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.































