ಶಿವಮೊಗ್ಗ : ನಗರದಲ್ಲಿ ಶುದ್ಧೀಕರಣ ಘಟಕದ ಹಳೆಯ ಯಂತ್ರ ಸಂಪೂರ್ಣ ಹಾಳಾಗಿರುವುದರಿಂದ, ಇನ್ನೂ ಆರು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ದುರಸ್ತಿ ಕಾರ್ಯ ಪರಿಶೀಲಿಸಿದ್ದು, ಪರ್ಯಾಯವಾಗಿ 12ಕ್ಕೂ ಹೆಚ್ಚು ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಗಾಲದಲ್ಲಿ ನಮಗೆ ಯಥೇಚ್ಛವಾಗಿ ನೀರು ಸಿಗುತ್ತಿದೆಯಾದರೂ ಇಲ್ಲಿನ ಶುದ್ಧೀಕರಣ ಘಟಕದಲ್ಲಿ ಅತ್ಯಂತ ಹಳೆಯ ಮಿಷನರಿ ವ್ಯವಸ್ಥೆ ಇರುವ ಕಾರಣ ಶುದ್ಧ ನೀರು ಸರಬರಾಜು ಮಾಡುವ ಕ್ಲಾರಿಫ್ಲೆಕ್ಟರ್ ಯಂತ್ರವು ಸಂಪೂರ್ಣ ಹಾಳಾಗಿದೆ. ನೀರು ಎಲ್ಲವೂ ಕಾಂಕ್ರಿಟ್ ಒಡೆದಿರುವುದರಿಂದ ಭೂಮಿಯ ಅಡಿಗೆ ಸೇರುತ್ತಿತ್ತು. ಪೈಪ್‌ಗಳು ತುಕ್ಕು ಹಿಡಿದಿದ್ದವು. ಅದನ್ನು ಸರಿಪಡಿಸಲು ಹೋದಾಗ ದುರಸ್ತಿ ಮಾಡಲೇಬೇಕಾದ ಅನಿವಾರ್ಯತೆ ಇದ್ದ ಕಾರಣ ಮುಂದೆ ಯಾವುದೇ ಸಮಸ್ಯೆ ಆಗಬಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ತುರ್ತಾಗಿ ಜಲಮಂಡಳಿ ವತಿಯಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

































