ಬೆಂಗಳೂರು : ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.
ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಗಣಿಸಿದಾಗ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು, ಕೋವಿಡ್ ಕಾರಣಕ್ಕೆ ನೇಮಕಾತಿ ವಿಳಂಬವಾಗಿದ್ದು, ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ವಯೋಮಿತಿ ಮೀರಿದೆ. ಆದರೆ ಈ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದ್ದು, ಮಾನವೀಯತೆ ದೃಷ್ಟಿಯಿಂದ ಪರಿಗಣಿಸಲಾಗುವುದು ಎಂದಿದ್ದಾರೆ.