ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ರಾಜ್ಯದ ಕೊಪ್ಪಳ, ಗದಗ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಇಂದು ಆಲಿಕಲ್ಲು ಸಮೇತ ಭಾರೀ ಮಳೆಯಾಗಿದೆ. ಗದಗ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, ಕಲಬುರಗಿಯಲ್ಲಿ ಓರ್ವ ರೈತ ಸಾವನ್ನಪ್ಪಿದ್ದಾರೆ.
ಧಾರವಾಡ ಹಾಗೂ ಲೋಂಡದಲ್ಲಿ ಮಳೆಯಾಗಿದೆ, ಕಲಬುರಗಿಯಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.