ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದಲ್ಲಿ ಹಾಲಿ ಇರುವ 66/11 ಕೆವಿ ಭರಮಸಾಗರ ವಿದ್ಯುತ್ ಉಪಕೇಂದ್ರದಿಂದ ಭರಮಸಾಗರ ಟ್ಯಾಪ್ ಪಾಯಿಂಟ್‍ವರೆಗೆ (ದಾವಣಗೆರೆ-ಚಿತ್ರದುರ್ಗ ಮಾರ್ಗ-01) 2.196 ಕಿ.ಮೀ ಉದ್ದದ 66 ಕೆವಿ ಒಂಟಿ ವಿದ್ಯುತ್ ಪ್ರಸರಣ ಮಾರ್ಗದಲ್ಲಿ ಉದ್ದೇಶಿತ 66 ಕೆವಿ ಜೋಡಿ ಪ್ರಸರಣ ಮಾರ್ಗ ನಿರ್ಮಾಣದ ಕಾಮಗಾರಿಯು ಮುಕ್ತಾಯಗೊಂಡಿರುತ್ತದೆ.
ಈ 66 ಕೆ.ವಿ.ವಿದ್ಯುತ್ ಮಾರ್ಗವನ್ನು ಇದೇ ಜನವರಿ 27ರಂದು ಅಥವಾ ತದನಂತರ ಚೇತನಗೊಳಿಸುವುದರಿಂದ ಈ 66 ಕೆವಿ ಪ್ರಸರಣ ಮಾರ್ಗದ ವಿದ್ಯುತ್ ಗೋಪುರಗಳನ್ನು ಸಾರ್ವಜನಿಕರು ಮುಟ್ಟುವುದಾಗಲಿ, ಹತ್ತುವುದಾಗಲಿ, ಮರದ ರೆಂಬೆ, ಲೋಹದ ತಂತಿಗಳನ್ನು ಹಾಗೂ ಇತರೆ ಯಾವುದೇ ವಸ್ತುಗಳನ್ನು ಮಾರ್ಗದ ಮೇಲೆ ಎಸೆಯುವುದಾಗಲಿ ಮತ್ತು ವಿದ್ಯುತ್ ಗೋಪುರಗಳಿಗೆ ಜಾನುವಾರುಗಳನ್ನು ಕಟ್ಟುವುದಾಗಲಿ ಮಾಡಬಾರದು ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಈ ಮಾರ್ಗದ ಮೊಗಸಾಲೆಯಲ್ಲಿ ಅಪಾಯದ ಮಟ್ಟದಲ್ಲಿ ಇರುವ ಮರಗಳನ್ನು ಸುರಕ್ಷತೆಯ ದೃಷ್ಠಿಯಿಂದ ಭೂ ಮಾಲೀಕರು ಕೂಡಲೇ ಮಾರ್ಗದ ಮೊಗಸಾಲೆಯಲ್ಲಿರುವ ಮರಗಳನ್ನು ಕಡಿದು ಹಾಕಲು ಅನುಮತಿ ನೀಡಬೇಕು. ಒಂದು ವೇಳೆ ಈ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಈ ಮಾರ್ಗದಿಂದ ಸಾರ್ವಜನಿಕರಿಗೆ ಆಗುವ ಹಾನಿ, ತೊಂದರೆ, ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜವಾಬ್ದಾರಿಯಾಗಿರುವುದಿಲ್ಲ.
ವಿದ್ಯುತ್ ಹಾದುಹೋಗುವ ಪ್ರದೇಶಗಳು: ಭರಮಸಾಗರ, ಹಂಪನೂರು ಮತ್ತು ಹೆಗ್ಗೆರೆ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಮಾರ್ಗ ಹಾದು ಹೋಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.