ಮಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ನೀಡಲಾಗಿದೆ.
ನಮ್ಮ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಹಾನಿ ಮಾಡುತ್ತಿರುವ ಯೂಟ್ಯೂಬರ್ಗಳು, ಸಾಮಾಜಿಕ ಮಾಧ್ಯಮ ಇನ್ಫ್ಲೂಯೆನ್ಸ್ರ್ಗಳು ವಿದೇಶದಿಂದ ಹಣದ ನೆರವು ಪಡೆಯುತ್ತಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ ಬಂಜರಂಗದಳ ಮುಖಂಡ ತೇಜಸ್ ಎ ಗೌಡ ಪತ್ರ ಬರೆದಿದ್ದಾರೆ.
ಧರ್ಮಸ್ಥಳ ಮಂಜುನಾಥ ಸ್ವಾಮಿ ಮಂದಿರದ ಹೆಸರು ಕೆಡಿಸಲು ಪ್ರಯತ್ನಿಸುತ್ತಿರುವ ಮುಸ್ಲಿಂ ಯೂಟ್ಯೂಬರ್ ಮತ್ತು ಅವರ ಸಹಚರರು ವಿದೇಶಿದಿಂದ ಹಣ ಪಡೆದಿದ್ದಾರೆ ಎಂದು ಮಾಧ್ಯಮಗಳು, ಸಾಮಾಜಿಕ ಮಾಧ್ಯಮ ಮತ್ತು ಮುದ್ರಣ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದ್ದರಿಂದ ಈ ದೂರುಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿ, ಧರ್ಮಸ್ಥಳ ಮಂಜುನಾಥ ಸ್ವಾಮಿ ಮಂದಿರವನ್ನು ವಿರೋಧಿಸುವವರು ಸ್ವೀಕರಿಸಿದ ವಿದೇಶಿ ಹಣಕಾಸು ವಹಿವಾಟಿನ ಬಗ್ಗೆ ವಿಚಾರಣೆ ನಡೆಸಬೇಕೆಂದು” ವಿನಂತಿಸಿಕೊಂಡಿದ್ದಾರೆ.