ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ.
ಮುಡಾ ಹಗರಣದ ತನಿಖೆಯನ್ನು ಇಡಿ ನಡೆಸುತ್ತಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಹಾಜರಾಗುವಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ಗೆ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆ ಸಿಎಂಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗಿದೆ. ಇನ್ನು ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಹಾಗೂ ಭೈರತಿ ಸುರೇಶ್ ಅವರು ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.
ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಸಲ್ಲಿಸಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ತಿಳಿಸಿದ್ದಾರೆ.