ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 9.30 ಕ್ಕೆ ಮೆಗಾ ವರ್ಚುವಲ್ ಸಂವಾದ ನಡೆಸಲಿದ್ದಾರೆ. 50 ಲಕ್ಷ ಬಿಜೆಪಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ರಾಜ್ಯದ 58,112 ಬೂತ್ ಗಳು ಹಾಗೂ 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಪ್ರಧಾನಿ ಮೋದಿ ಅವರು 50 ಲಕ್ಷ ಬಿಜೆಪಿ ಕಾರ್ಯಕರ್ತರರೊಂದಿಗೆ ವರ್ಚುವಲ್ ಸಂವಾದ ನಡೆಸಲಿದ್ದಾರೆ.
ಬೂತ್ ಗಳಲ್ಲಿ ಟಿ.ವಿಗಳು ಹಾಗೂ ಜಿಲ್ಲಾ ಪಂಚಾಯತಿ ಮಟ್ಟದಲ್ಲಿ ಎಲ್ ಇಡಿ ಸ್ಕ್ರೀನ್ ಅಳವಡಿಸಲಾಗುವುದು. ಈ ಸಂವಾದಕ್ಕಾಗಿ ಈಗಾಗಲೇ 24 ಲಕ್ಷ ಕಾರ್ಯಕರ್ತರು ಮೋದಿ ಆ್ಯಪ್ ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಪಕ್ಷದ ರಾಜ್ಯ ನಾಯಕರು ಚುನಾವಣಾ ಪ್ರಚಾರದಲ್ಲಿರುವ ಕ್ಷೇತ್ರಗಳಿಂದಲೇ ಈ ಸಂವಾದಲ್ಲಿ ಪಾಲ್ಗೊಳ್ಳಲಿದ್ದಾರೆ.