ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದು, ಎರಡು ದಿನಗಳ ಕಾಲ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಮಾಡಲಿದ್ದಾರೆ.
ಇಂದು ಮಧ್ಯಾಹ್ನ 2.45 ಕ್ಕೆ ವಿಶೇಷ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸುವ ರಾಹುಲ್ ಗಾಂಧಿ ಬಳಿಕ ಅಲ್ಲಿಂದ ಉಡುಪಿ ಜಿಲ್ಲೆಯ ಕಾಪು ಕ್ಷೇತ್ರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಲಿದ್ದಾರೆ. ಸಂಜೆ 5 ಕ್ಕೆ ಮೀನುಗಾರರ ಜೊತೆಗೆ ಸಂವಾದ ನಡೆಸಿ, ಮಂಗಳೂರಿಗೆ ತೆರಳಲಿದ್ದಾರೆ. ಅಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಮಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ತೆರಳಿದ್ದಾರೆ. ಶುಕ್ರವಾರ ಕಲಬುರಗಿಯಿಂದ ಚಿಂಚೋಳಿ ಕ್ಷೇತ್ರಕ್ಕೆ ತೆರಳಿ ಸುಲೇಪೇಟದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕುಷ್ಟಗಿ ಕ್ಷೇತ್ರಕ್ಕೆ ತೆರಳಿ ಪ್ರಚಾರ ನಡೆಸಿ ದೆಹಲಿಗೆ ವಾಪಸ್ ಆಗಲಿದ್ದಾರೆ.