ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಪ್ರಚಾರದ ಗುಣಮಟ್ಟ ಕುಸಿಯುತ್ತಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಸಂಯಮದಿಂದ ವರ್ತಿಸುವಂತೆ ರಾಜಕೀಯ ಪಕ್ಷಗಳಿಗೆ ಸೂಚಿಸಿದೆ.
ಪ್ರಚಾರದಲ್ಲಿ ಭಾಗಿಯಾಗಿರುವ ಸಿನಿಮಾ ಸ್ಟಾರ್‌ಗಳು, ರಾಜಕೀಯ ನಾಯಕರು, ಭಾಷಣದ ವೇಳೆ ಹದ್ದುಮೀರಿದ ವರ್ತನೆ ತೋರುತ್ತಿರುವ ಹಿನ್ನೆಲೆ, ತಮ್ಮ ಹೇಳಿಕೆಗಳಲ್ಲಿ ಎಚ್ಚರಿಕೆ ಮತ್ತು ಸಂಯಮ ಕಾಪಾಡಿಕೊಳ್ಳುವಂತೆ ಎಲ್ಲ ಪಕ್ಷದ ನಾಯಕರು, ಸ್ಟಾರ್ ಪ್ರಚಾರಕರಿಗೆ ಚುನಾವಣಾ ಆಯೋಗ ಖಡಕ್ ಸೂಚನೆ ನೀಡಿದೆ.