ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ರಂಗೇರುತ್ತಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದೆ. ಈ ಹಿನ್ನೆಲೆ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಬಳಿಕ ತಮ್ಮ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದರು. ಆದರೆ ಸದ್ಯ ಸೌಭಾಗ್ಯ ಬಸವರಾಜನ್ ಚುನಾವಣಾ ಕಣದಿಂದ ನಿವೃತ್ತಿ ಬಿಜೆಪಿ ಸೇರ್ಪಡೆ ಆಗಿದ್ದಾರೆ.
ಚಿತ್ರದುರ್ಗ ನಗರದ ಕಮ್ಮರೆಡ್ಡಿ ಸಮುದಾಯ ಭವನ ಪ್ರಚಾರ ಸಭೆಯಲ್ಲಿ ಗುರುವಾರ ಬಸವರಾಜನ್ ದಂಪತಿ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ G.H.ತಿಪ್ಪಾರೆಡ್ಡಿ ಉಪಸ್ಥಿತರಿದ್ದರು.